ಭಾರತದಲ್ಲಿ ಕ್ರಿಪ್ಟೋಕರೆನ್ಸಿ ನಿಷೇಧ ? ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ ಸಾಧ್ಯತೆ

Prasthutha|

ನವದೆಹಲಿ: ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಗಳಿಗೆ ಭಾರತದಲ್ಲಿ ನಿಷೇಧ ಹೇರುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ಸಿದ್ಧತೆ ನಡೆಸಲಾಗಿದೆ.

- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು 29 ಮಸೂದೆಗಳನ್ನು ಮಂಡಿಸುತ್ತಿದ್ದು, ಅದರಲ್ಲಿ ‘ಕ್ರಿಪ್ಟೋ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ-2021’ ಕೂಡ ಸೇರಿದೆ.

ಕರ್ನಾಟಕದಲ್ಲಿ  ರಾಜ್ಯದಲ್ಲಿ ಕ್ರಿಪ್ಟೋ ಕರೆನ್ಸಿ ವಿಚಾರ ರಾಜಕೀಯ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದ್ದರೆ, ಅತ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗಷ್ಟೇ ಕ್ರಿಪ್ತೋಕರೆನ್ಸಿ ಬಗ್ಗೆ ಪ್ರಸ್ತಾಪಿಸಿದ್ದರು. ಹೂಡಿಕೆದಾರರನ್ನು ತಪ್ಪುದಾರಿಗೆಳೆಯಲು ಇಂತಹ ಕರೆನ್ಸಿಗಳನ್ನು ಬಳಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ  ಕಳವಳ ವ್ಯಕ್ತಪಡಿಸಿತ್ತು.

- Advertisement -

‘ಕ್ರಿಪ್ಟೋ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ-2021’ ಪ್ರಕಾರ, ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಮುಂದಾಗಲಿದೆ. ಆದರೆ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ಇದು ಅನುಮತಿಸುತ್ತದೆ. ಬಿಲ್ ರಚನೆಗೆ ಚೌಕಟ್ಟನ್ನು ರಚಿಸುವ ಗುರಿ ಹೊಂದಿದೆ ಭಾರತೀಯ ರಿಸರ್ವ್ ಬ್ಯಾಂಕ್ ಅಧಿಕೃತ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಸ್ತುತ, ದೇಶದಲ್ಲಿ ಕ್ರಿಪ್ಟೋ ಕರೆನ್ಸಿಗಳ ಬಳಕೆಯ ಮೇಲೆ ಯಾವುದೇ ನಿರ್ದಿಷ್ಟ ನಿಯಮಗಳು ಅಥವಾ ಯಾವುದೇ ನಿಷೇಧವಿಲ್ಲ. ಈ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಿರಿಯ ಅಧಿಕಾರಿಗಳೊಂದಿಗೆ ಕ್ರಿಪ್ಟೋ ಕರೆನ್ಸಿಗಳ ಕುರಿತು ಸಭೆ ನಡೆಸಿದ್ದರು. ಸಮಸ್ಯೆಯನ್ನು ಎದುರಿಸಲು ಬಲವಾದ ನಿಯಂತ್ರಕ ಕ್ರಮಗಳನ್ನು ತೆಗೆದುಕೊಳ್ಳಬಹುದಾದ ಸೂಚನೆಗಳಿವೆ. ಪ್ರಸ್ತಾವಿತ ಮಸೂದೆಯು ಹೂಡಿಕೆದಾರರ ರಕ್ಷಣೆಗೆ ಒತ್ತು ನೀಡಲಿದೆ ಎಂದು ಮೂಲಗಳು ತಿಳಿಸಿವೆ.

Join Whatsapp