ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಪದ್ಮರಾಜ್

Prasthutha|

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಬಿಲ್ಲವ ಸಮುದಾಯದ ಯುವ ನಾಯಕ ಪದ್ಮರಾಜ್‌ ಆರ್‌ ನೇಮಕಗೊಂಡಿದ್ದಾರೆ.

- Advertisement -

ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಪದ್ಮರಾಜ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಹೊಂದಿರದ, ಕನಿಷ್ಠ ಟಿಕೆಟ್‌ಗಾಗಿ ಅರ್ಜಿಯನ್ನೂ ಸಲ್ಲಿಸದ ಇವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಬಂಡಾಯವೇಳಬಹುದು ಎನ್ನುವ ಕಾರಣಕ್ಕೆ ಇವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗಿತ್ತು.

ಇದೀಗ ಚುನಾವಣಾ ಹೊತ್ತಿನಲ್ಲೇ ಆರ್‌ ಪದ್ಮರಾಜ್‌ ಅವರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

- Advertisement -

ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಇವರು ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.



Join Whatsapp