ಬಂಟ್ವಾಳ: ಕುಂಡಡ್ಕ ದೈವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ನಿಷೇಧ ?

Prasthutha: December 19, 2021

ಬಂಟ್ವಾಳ: ದೈವಸ್ಥಾನಕ್ಕೆ ಪ್ರಾರ್ಥನೆಗೆಂದು ತೆರಳಿದ್ದ ಬಿಲ್ಲವ ಸಮುದಾಯದ ಯುವಕರನ್ನು ಹೊರಗೆ ಕಳುಹಿಸಿದ ಘಟನೆ ವಿಟ್ಲ ಮೂಡ್ನೂರು ಗ್ರಾಮದ ಕುಂಡಡ್ಕ ಎಂಬಲ್ಲಿ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಬಂಟ್ವಾಳದ ಪಿಲಿಂಜ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಬ್ರಹ್ಮಕಲಶೋತ್ಸನ ಸಮಿತಿ ಅಧ್ಯಕ್ಷರ ಜತೆ ಬಿಲ್ಲವ ಸಮುದಾಯದ ಇಬ್ಬರು ಯುವಕರು ಇತರರೊಂದಿಗೆ ತೆರಳಿದ್ದು, ದೈವಸ್ಥಾನದ ಉಸ್ತುವಾರಿ, ಅಧ್ಯಕ್ಷರ ಜೊತೆ ಮಾತನಾಡಿ ದೈವಸ್ಥಾನದ ಒಳಾಂಗಣಕ್ಕೆ ಬಿಲ್ಲವರು ಬರುವಂತಿಲ್ಲ ಎಂದಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ದೈವಸ್ಥಾನಕ್ಕೆ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಲ್ಲವ ಯುವಕರು ಬಿಲ್ಲವ ಸಮುದಾಯದ ಮುಖಂಡರಿಗೆ ಈ ಸಂಬಂಧ ದೂರು ನೀಡಿದ್ದಾರೆ. ಮಾತ್ರವಲ್ಲ ಈ ಕುರಿತ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು.

ಈ ನಡುವೆ ಇನ್ನು ಮುಂದಕ್ಕೆ ದೈವಸ್ಥಾನಕ್ಕೆ ಬಿಲ್ಲವರು ಪ್ರವೇಶಿಸುವುದನ್ನು ನಿರ್ಬಂಧಿಸಿದರೆ ತೀವ್ರ ರೀತಿಯ ಪ್ರತಿಭಟನೆ, ಹೋರಾಟ ನಡೆಸುವ ಕುರಿತು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!