Home ಟಾಪ್ ಸುದ್ದಿಗಳು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ನಿಧನ

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ನಿಧನ

ಬೆಂಗಳೂರು: ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಪತಿ ಹಾಗೂ ಬಯೋಕಾನ್ ಇಂಡಿಯಾ ಮಾಜಿ ಉಪಾಧ್ಯಕ್ಷ ಜಾನ್ ಶಾ ಸೋಮವಾರ ನಿಧನರಾಗಿದ್ದಾರೆ.

ಅವರಿಗೆ 65 ವರ್ಷ ವಯಸ್ಸಾಗಿತ್ತು. ಜಾನ್ ಶಾ ಅವರು ಇಂಗ್ಲೆಂಡ್ ಮೂಲದವರಾಗಿದ್ದು, ಗ್ಲಾಸ್ಗೋ ವಿವಿಯಲ್ಲಿ ಪದವಿ ಪಡೆದಿದ್ದರು.

ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.  ಮಧುರಾ ಕೋಟ್ಸ್ ಲಿಮಿಟೆಡ್ ನ ಮಾಜಿ ಅಧ್ಯಕ್ಷ,  ಕೋಟ್ಸ್ ವಿಯೆಲ್ಲಾ ಗ್ರೂಪ್ ನ ಮಾಜಿ ಹಣಕಾಸು ಮತ್ತು ವ್ಯವಸ್ಥಾಪಕ ನಿರ್ದೇಶಕ, ಬಯೋಕಾನ್ ಗ್ರೂಪ್ ಕಂಪನಿಗಳ ಸಲಹಾ ಮಂಡಳಿಯ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. 

ಅವರ ಅಂತ್ಯಕ್ರಿಯೆ ಬೆಂಗಳೂರಿನ ವಿಲ್ಸನ್ ಗಾರ್ಡನ್  ಸ್ಮಶಾನದಲ್ಲಿ ಸೋಮವಾರ ಸಂಜೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version