Home ಟಾಪ್ ಸುದ್ದಿಗಳು ಬಿರ್ಭೂಮ್ ಹಿಂಸಾಚಾರ: ತ್ವರಿತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ ಮಮತಾ ಬ್ಯಾನರ್ಜಿ

ಬಿರ್ಭೂಮ್ ಹಿಂಸಾಚಾರ: ತ್ವರಿತ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಬಿರ್ಭೂಮ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬಗಳಿಗೆ “ತ್ವರಿತ ನ್ಯಾಯ” ವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರವಸೆಯನ್ನು ನೀಡಿದ್ದಾರೆ.

ಬೊಗ್ಟುಯಿಯಲ್ಲಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ್ದು, ಸುಟ್ಟುಹೋದ ಮನೆಗಳನ್ನು ಮರುನಿರ್ಮಾಣಕ್ಕಾಗಿ ರೂ 2 ಲಕ್ಷ ಪರಿಹಾರವನ್ನು ಘೋಷಿಸಿದರು. ಇದಲ್ಲದೆ, ಮೃತರ ಸಂಬಂಧಿಕರಿಗೆ ತಲಾ 5 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಅವರು ಘೋಷಿಸಿದರು. ಹಿಂಸಾಚಾರದಿಂದ ಪೀಡಿತ ಹತ್ತು ಕುಟುಂಬಗಳಿಗೆ ಉದ್ಯೋಗದ ಭರವಸೆಯನ್ನು ನೀಡಿದರು.

ಮಂಗಳವಾರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಹಿಂಸಾಚಾರ ಪೀಡಿತ ಜಿಲ್ಲೆಯಲ್ಲಿ ಸಿಎಂ ಭೇಟಿಗೆ ಮುನ್ನ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಕಾಂಗ್ರೆಸ್ ನಿಯೋಗವನ್ನು ಬ್ಯಾನರ್ಜಿ ಆಗಮಿಸುವ ಸ್ವಲ್ಪ ಸಮಯದ ಮೊದಲು ಬಿರ್ಭೂಮ್ ನ ಶಾಂತಿನಿಕೇತನದಲ್ಲಿ ನಿಲ್ಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version