ಕೇರಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರ

Prasthutha|

ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.

- Advertisement -


ಇಂದಿನಿಂದ (ಸೋಮವಾರ) ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್ ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸುತ್ತೇವೆ ಎಂದು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

Join Whatsapp