Home ಟಾಪ್ ಸುದ್ದಿಗಳು ಇನ್ನು ಮುಂದೆ ಯಾವುದೇ ದಾಖಲೆಗಳನ್ನು ಪಡೆಯಲು ಜನನ ಪ್ರಮಾಣ ಪತ್ರ ಕಡ್ಡಾಯ!

ಇನ್ನು ಮುಂದೆ ಯಾವುದೇ ದಾಖಲೆಗಳನ್ನು ಪಡೆಯಲು ಜನನ ಪ್ರಮಾಣ ಪತ್ರ ಕಡ್ಡಾಯ!

ಹೊಸದಿಲ್ಲಿ:  ಮತದಾರರ ಪಟ್ಟಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿ, ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾತಿ, ಪಾಸ್‍ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ಪಡೆಯಲು ಜನನ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲಾಗಿದೆ.

ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಾದ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಹಾಲಿ ಇರುವ ಜನನ ಮತ್ತು ಮರಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ತೀರ್ಮಾನಿಸಿದೆ.

ಈಗಾಗಲೇ ಕಾಯ್ದೆಗೆ ತಿದ್ದುಪಡಿ ಮಾಡಲು ಅಗತ್ಯವಿರುವ ಕರಡನ್ನು ಸಿದ್ದಪಡಿಸಲಾಗಿದ್ದು, ಬರಲಿರುವ ಅಧಿವೇಶನದಲ್ಲಿ ಮಂಡಿಸಲು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಸಿದ್ದತೆ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಈಗಿರುವ ಕಾಯ್ದೆ ತಿದ್ದುಪಡಿಯಾಗಿ ಅಂಗೀಕಾರವಾದರೆ ಇನ್ನು ಮುಂದೆ ಜನನ ಪ್ರಮಾಣಪತ್ರ ಇದ್ದರೆ ಮಾತ್ರ ಮತದಾರರ ಗುರುತಿನಚೀಟಿ, ಚಾಲನ ಪರವಾನಗಿ, ಆಧಾರ್, ಬ್ಯಾಂಕ್ ಖಾತೆ, ಶಾಲಾ ಮತ್ತು ಕಾಲೇಜುಗಳಲ್ಲಿ ದಾಖಲಾತಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಗಳು ಲಭ್ಯವಾಗಲಿದೆ. ಕೆಲವು ಪ್ರಾಯೋಗಿಕ ಯೋಜನೆಗಳಿಗೂ ಇದು ಕಡ್ಡಾಯವಾಗಲಿದೆ.

Join Whatsapp
Exit mobile version