ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್

Prasthutha|

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಸಂಬಂಧ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ವಿನಾಯಿತಿ ನೀಡಿದೆ.

- Advertisement -


ಮುಂದಿನ ದಿನಾಂಕದವರೆಗೆ ಕೋರ್ಟ್ ಗೆ ಖುದ್ದು ಹಾಜರಿಯಿಂದ ವಿನಾಯಿತಿ ನೀಡಿದ ಏಕಸದಸ್ಯ ಪೀಠ, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.


ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ವೇಳೆ ವಾದ ಮಂಡಿಸಿದ ಎಸ್ ಪಿಪಿ ಪ್ರಸನ್ನಕುಮಾರ್, ತನಿಖೆಗೆ ತಡೆ ನೀಡದಂತೆ ಮನವಿ ಮಾಡಿದರು. ಹಿಂದಿನ ತನಿಖೆಯಲ್ಲಿ ಲೋಪ ಕಂಡು ಬಂದಿರುವುದರಿಂದ ಹೊಸದಾಗಿ ಎಫ್ ಐಆರ್ ದಾಖಲಿಸಿ ಎಫ್ ಎಸ್ ಎಲ್ ವರದಿ ಆಧರಿಸಿ ಮರು ತನಿಖೆ ನಡೆಸಲಾಗುತ್ತಿದೆ. ಅಧಿಕಾರಿಗಳ ಪಾತ್ರದ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.

Join Whatsapp