ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಎಸ್ ಐಟಿ ಐಜಿಪಿ ಸಂದೀಪ್ ಪಾಟೀಲ್ ಗೆ ಮತ್ತೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್ ಗೆ ನೋಟಿಸ್ ನೀಡಲಾಗಿದೆ. ಜತೆಗೆ, ಈ ಹಿಂದೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟಿಸ್ ನೀಡಿತ್ತು. ಆದರೆ, ಸಂದೀಪ್ ಪಾಟೀಲ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಬಗ್ಗೆ ಕಾರಣ ತಿಳಿಸುವಂತೆಯೂ ನೋಟಿಸ್ ನಲ್ಲಿ ಎಸ್ ಐಟಿ ಸೂಚಿಸಿದೆ.
ಬಿಟ್ ಕಾಯಿನ್ ಹಗರಣ ಸಂಬಂಧ ಫೆಬ್ರವರಿಯಲ್ಲಿ ಸಂದೀಪ್ ಪಾಟೀಲ್ ರನ್ನು ಎಸ್ ಐಟಿ ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಸುಮಾರು 3 ತಾಸು ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿತ್ತು. ಬಿಟ್ ಕಾಯಿನ್ ಹಗರಣ ನಡೆದ ಸಂದರ್ಭದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು.