ಬೆಂಗಳೂರು: ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು, ಸಾಕ್ಷ್ಯ ನಾಶ ಮಾಡಿದ ಹಿನ್ನೆಲೆ ಈ ಇಬ್ಬರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ಐವರನ್ನು ವಶಕ್ಕೆ ಪಡೆದಿದ್ದರು. ಬಂಧಿತರಲ್ಲಿ ಪ್ರಶಾಂತ್ ಬಾಬು ಸೈಬರ್ ಇನ್ಸ್ಪೆಕ್ಟರ್ ಆಗಿದ್ದು, ಸಂತೋಷ್ ಸೈಬರ್ ಸೆಂಟರ್ ವ್ಯಕ್ತಿ ಆಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದೆ. ಅಕ್ರಮ ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ.