ಬಿಜೆಪಿಯ 5ನೇ ಪಟ್ಟಿ ಪ್ರಕಟ: ಅನಂತ್ ಕುಮಾರ್ ಔಟ್, ಕಾಗೇರಿಗೆ ಟಿಕೆಟ್

Prasthutha|

- Advertisement -

ಬೆಳಗಾವಿಯಿಂದ ಶೆಟ್ಟರ್ ಕಣಕ್ಕೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ.

- Advertisement -

ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು,
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.

ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಪೆಂಡಿಂಗ್ ನಲ್ಲಿ ಇಡಲಾಗಿದೆ.

ಯಾರಿಗೆ ಟಿಕೆಟ್

ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ್​​​
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ (ಹಾಲಿ ಸಂಸದ ಅನಂತಕುಮಾರ ಹೆಗಡೆಗೆ ಕೈತಪ್ಪಿದ ಟಿಕೆಟ್)
ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ್ ಶೆಟ್ಟರ್​
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಇನ್ನೂ ಪೆಂಡಿಂಗ್



Join Whatsapp