TMC ಸಂಸದ ಅಭಿಷೇಕ್ ಬ್ಯಾನರ್ಜಿ ವಾಹನದ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರು

Prasthutha|

ಅಗರ್ತಲಾ: ತ್ರಿಪುರಾಕ್ಕೆ ಭೇಟಿ ನೀಡಿದ್ದ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ವಾಹನದ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಸ್ವತಃ ಅಭಿಷೇಕ್ ಬ್ಯಾನರ್ಜಿ ಅವರು ಟ್ವಿಟರ್‌ನಲ್ಲಿ ದಾಳಿ ನಡೆಸಿದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

- Advertisement -

“ತ್ರಿಪುರಾದಲ್ಲಿ ಪ್ರಜಾಪ್ರಭುತ್ವ ಬಿಜೆಪಿಯ ಆಡಳಿತದಲ್ಲಿದೆ. ರಾಜ್ಯವನ್ನು ಹೊಸ ಉತ್ತುಂಗಕ್ಕೆ ಕೊಂಡೊಯ್ದ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರಿಗೆ ಅಭಿನಂದನೆಗಳು” ಎಂದು ಅಭಿಷೇಕ್ ಬ್ಯಾನರ್ಜಿ ಟ್ವಿಟ್ಟರ್ ನಲ್ಲಿ ವೀಡಿಯೋ ಹಂಚಿಕೊಂಡಿದ್ದಾರೆ. ರಸ್ತೆ ಬದಿಯಲ್ಲಿ ಬಿಜೆಪಿ ಧ್ವಜದೊಂದಿಗೆ ನಿಂತ ಕಾರ್ಯಕರ್ತರು ವಾಹನದ ಮೇಲೆ ದಾಳಿ ಮಾಡುತ್ತಿರುವುದು ವೀಡಿಯೋದಲ್ಲಿ ಕಾಣಬಹುದು.

ವೀಡಿಯೋ ವೀಕ್ಷಿಸಿ….

- Advertisement -

ತ್ರಿಪುರಾದಲ್ಲಿನ ದಾಳಿ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲಾಗುವುದು ಎಂದು ತೃಣಮೂಲ ರಾಜ್ಯಸಭಾ ಸಂಸದ ಡೆರಿಕ್ ಒ’ಬ್ರಿಯಾನ್ ಹೇಳಿದ್ದಾರೆ. ನಿನ್ನೆ ಅಭಿಷೇಕ್ ಅವರು ತ್ರಿಪುರಕ್ಕೆ ಭೇಟಿ ನೀಡುವ ಬಗ್ಗೆ ಹಾಕಲಾಗಿದ್ದ ಪೋಸ್ಟರ್‌ಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದರು.

ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯನಾಗಿರುವ ಅಭಿಷೇಕ್ ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ತ್ರಿಪುರಕ್ಕೆ ಭೇಟಿ ನೀಡಿದ್ದರು. 2023 ರಲ್ಲಿ ತ್ರಿಪುರಾ ವಿಧಾನಸಭಾ ಚುನಾವಣೆ ನಡೆಯಲಿದೆ.



Join Whatsapp