ಯಾದಗಿರಿ: ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಜನ ಆಶೀರ್ವಾದ ಯಾತ್ರೆ’ಯ ವೇಳೆ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ ಮಾಡಿರುವ ಘಟನೆ ಯರಗೋಳ ಬಳಿ ನಡೆದಿದೆ.
ಒಂದು ಸಾವಿರಕ್ಕೂ ಹೆಚ್ಚು ಜನರು ಬಿಜೆಪಿಯ ಜನಾಶೀರ್ವಾದ ಯಾತ್ರೆಯಲ್ಲಿ ಮಾಸ್ಕ್, ದೈಹಿಕ ಅಂತರ ಕೂಡ ಕಾಪಾಡಿಕೊಳ್ಳದೆ ಭಾಗವಹಿಸಿದ್ದರು. ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವರಿಗೆ ಸ್ವಾಗತ ಕೋರಿದ್ದಾರೆ. ಈ ಕುರಿತ ವೀಡಿಯೋ ವೈರಲ್ ಆಗಿದೆ.
ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ನೂರಾರು ಜನರು ಒಟ್ಟಿಗೆ ಜಮಾಯಿಸಿದ್ದು ವೀಡಿಯೋದಲ್ಲಿದೆ. ಈ ಬಗ್ಗೆ ಜಿಲ್ಲಾಡಳಿತ ಮೌನಕ್ಕೆ ಶರಣಾಗಿರುವುದರ ವಿರುದ್ಧ ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.