ಲಕ್ನೋ; ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ನೋಡಿದೆ.
ಬಿಜೆಪಿ ಮೈತ್ರಿಕೂಟದ ಅಂಗಪಕ್ಷವಾಗಿರುವ ಅಪ್ನಾ ದಳ್ [ಎಸ್], ಸುವಾರ್ ವಿಧಾನಸಭಾ ಕ್ಷೇತ್ರದಿಂದ ಹೈದರ್ ಅಲಿ ಖಾನ್’ರನ್ನು ಕಣಕ್ಕಿಳಿಸಿದೆ.
2014ರ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಮೈತ್ರಿಕೂಟದಡಿಯಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ನೂರ್ ಭಾನೊ ಅವರ ಮೊಮ್ಮಗನಾಗಿರುವ 36 ವರ್ಷದ ಹೈದರ್ ಅಲಿ ಖಾನ್’ಗೆ ಮೊದಲು ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿ ಸ್ಪರ್ಧಿಸಲು ಸೂಚನೆ ನೀಡಿತ್ತು. ಆದರೆ ಕಾಂಗ್ರೆಸ್’ಗೆ ರಾಜೀನಾಮೆ ನೀಡಿ ಅನುಪ್ರಿಯಾ ಪಟೇಲ್ ನೇತೃತ್ವದ ಅಪ್ನಾ ದಳ್ ಸೇರಿದ ಹೈದರ್,
ಸುವಾರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ.
ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಝಂ ಖಾನ್ ಪುತ್ರ ಅಬ್ದುಲ್ಲಾ ಅಝಂ ಸುವಾರ್ ಕ್ಷೇತ್ರದಲ್ಲಿ ಹೈದರ್’ಗೆ ಎದುರಾಳಿಯಾಗುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ರಾಂಪುರ್ ರಾಜಮನೆತನದ ಕುಡಿಯಾಗಿರುವ ಹೈದರ್ ಅಲಿ ಖಾನ್, ಯುಕೆಯ ಎಸ್ಸೆಕ್ಸ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.