ರಾಜ್ಯಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Prasthutha|

ನವದೆಹಲಿ: ಮುಂಬರುವ ರಾಜ್ಯಸಭಾ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ, ರಾಜ್ಯ ಖಾತೆಯ ಕೇಂದ್ರ ಸಚಿವ ಎಲ್ ಮುರುಗನ್ ಅವರನ್ನು ಕ್ರಮವಾಗಿ ಅಸ್ಸಾಮ್ ಮತ್ತು ಮಧ್ಯಪ್ರದೇಶಕ್ಕೆ ಅಭ್ಯರ್ಥಿಗಳಾಗಿ ಘೋಷಿಸಿದೆ.

ಅಸ್ಸಾಮಿನ ಬಿಶ್ವಜಿತ್ ದೈಮರಿ ಮತ್ತು ಮಧ್ಯಪ್ರದೇಶದ ತವಾರ್ ಚಂದ್ ಗೆಹ್ಲೋಟ್ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಮೇಲಿನ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ರಾಜ್ಯಸಭಾ ಸೀಟನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಬಿಜೆಪಿ ಯೋಜನೆ ಹಮ್ಮಿಕೊಂಡಿದೆ.

- Advertisement -