ಪರಿಷತ್ ಚುನಾವಣೆ: ಬಿಜೆಪಿ ಪಟ್ಟಿ ಪ್ರಕಟ

Prasthutha|

►ಯಡಿಯೂರಪ್ಪ ಪುತ್ರನಿಗೆ ಕೈ ತಪ್ಪಿದ ಟಿಕೆಟ್

- Advertisement -

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ, ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.
ಲಕ್ಷ್ಮಣ ಸವದಿ, ಚಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್, ಹೇಮಲತಾ ನಾಯಕ್ ಅವರನ್ನು ಹೆಸರನ್ನು ಅಂತಿಮಗೊಳಿಸಲಾಗಿದೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅವರಿಗೆ ಟಿಕೆಟ್ ಕೈತಪ್ಪಿದೆ.

- Advertisement -

ಯಡಿಯೂರಪ್ಪ ಅವರು ತಮ್ಮ ಪುತ್ರ ವಿಜಯೇಂದ್ರಗೆ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದರು. ಆದರೆ ಹೈಕಮಾಂಡ್ ಅವರ ಮಾತಿಗೆ ಮನ್ನಣೆ ನೀಡಿಲ್ಲ. ವಿಧಾನ ಪರಿಷತ್‌ ಪ್ರವೇಶ ಪಡೆದು ಸಚಿವ ಸಂಪುಟದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬೇಕೆಂಬ ಬಿ.ವೈ.ವಿಜಯೇಂದ್ರ ಅವರ ಕನಸು ನುಚ್ಚುನೂರಾಗಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲೇ ಕೇಳಿಬರುತ್ತಿದೆ.

Join Whatsapp