ದೆಹಲಿ: ಮಧ್ಯಪ್ರದೇಶ, ಛತ್ತೀಸ್ ಗಢ ಮತ್ತು ರಾಜಸ್ಥಾನದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಐದು ದಿನಗಳ ನಂತರ, ಬಿಜೆಪಿ ಈ ರಾಜ್ಯದಲ್ಲಿ ತನ್ನ ಶಾಸಕಾಂಗ ಪಕ್ಷಗಳ ನಾಯಕರನ್ನು ಆಯ್ಕೆ ಮಾಡಲು ಕೇಂದ್ರ ವೀಕ್ಷಕರನ್ನು ಶುಕ್ರವಾರ ನೇಮಿಸಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿನೋದ್ ತಾವಡೆ ಮತ್ತು ಸರೋಜ್ ಪಾಂಡೆ ಅವರನ್ನು ರಾಜಸ್ಥಾನದ ವೀಕ್ಷಕರನ್ನಾಗಿ ಪಕ್ಷ ನೇಮಕ ಮಾಡಿದೆ. ಮಧ್ಯಪ್ರದೇಶಕ್ಕೆ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೆ ಲಕ್ಷ್ಮಣ್ ಮತ್ತು ಆಶಾ ಲಾಕ್ರಾ ಅವರನ್ನು ನೇಮಿಸಲಾಗಿದೆ. ಛತ್ತೀಸ್ಗಢದಲ್ಲಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಸರ್ಬಾನಂದ ಸೋನೋವಾಲ್ ಮತ್ತು ದುಷ್ಯಂತ್ ಗೌತಮ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ.