ಬಿಜೆಪಿ ಕೊಲೆಗಡುಕ ಸರ್ಕಾರ | ಲೂಟಿ ನಿಲ್ಲಿಸಿ, ಅಸಹಾಯಕರ ನೆರವಿಗೆ ಧಾವಿಸಲಿ: ಕುಮಾರಸ್ವಾಮಿ

Prasthutha|

ಬೆಂಗಳೂರು: ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣಕ್ಕೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ‘ಕೊಲೆಗಡುಕ ಸರ್ಕಾರ’ ಎಂದು ಕಿಡಿಕಾರಿದ್ದಾರೆ.


ಸರ್ಕಾರ ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಇಂಥವರ ನೆರವಿಗೆ ಧಾವಿಸಬೇಕಿತ್ತು. ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ.

- Advertisement -


ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ನಾನು ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.



Join Whatsapp