ಬೆಂಗಳೂರು: ಬೆಂಗಳೂರಿಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ನ ಹಿರಿಯ ನಾಯಕ ಬಸವರಾಜ ಹೊರಟ್ಟಿ ಭೇಟಿಯಾಗಿದ್ದು, ಈ ಮೂಲಕ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ಅಮಿತ್ ಷಾ ಒಪ್ಪಿಗೆ ನೀಡಿದ್ದಾರೆ.
ಸುಮಾರು 42 ವರ್ಷಗಳ ಕಾಲ ಜೆಡಿಎಸ್ನಲ್ಲಿದ್ದ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರುವುದು ಖಚಿತವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಭಾಪತಿ ಬಸವರಾಜ ಹೊರಟ್ಟಿ, ಶೀಘ್ರದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.