Home ಟಾಪ್ ಸುದ್ದಿಗಳು ಪೋಲಿಸ್ ಪೇದೆ ಕೊಲೆ ಆರೋಪಿಗಳ ಪರ ಬಿಜೆಪಿ ಬ್ಯಾಟಿಂಗ್: ಸಚಿವ ಪ್ರಿಯಾಂಕ್ ಖರ್ಗೆ

ಪೋಲಿಸ್ ಪೇದೆ ಕೊಲೆ ಆರೋಪಿಗಳ ಪರ ಬಿಜೆಪಿ ಬ್ಯಾಟಿಂಗ್: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ತವ್ಯನಿರತ ಪೋಲಿಸ್ ಪೇದೆಯ ಮೇಲೆ ಟ್ಯಾಕ್ಟರ್ ಹತ್ತಿಸಿ ಕೊಂದ ಆರೋಪಿ ಪರವಾಗಿ ಬಿಜೆಪಿ ಶಾಸಕ ಅಭ್ಯರ್ಥಿಗಳು ಹಾಗೂ ವಿಧಾನಪರಿಷತ್ ಸದಸ್ಯರ ಪುತ್ರ, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಇತರೆ ಬಿಜೆಪಿ ನಾಯಕರು ಮಾತನಾಡುತ್ತಿರುವುದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿತ್ತು. ರೌಡಿಶೀಟರ್ ಗಳು ಪೊಲೀಸ್ ಅಧಿಕಾರಗಳ ಬರ್ತಡೇ ಪಾರ್ಟಿ ಆಯೋಜನೆ ಉಸ್ತುವಾರಿ ನೋಡಿಕೊಳ್ಳುವಂತಹ ಹೀನಾಯ ಸ್ಥಿತಿ ಬಂದೊದಗಿತ್ತು.


ಬಿಜೆಪಿ ಸರ್ಕಾರದಲ್ಲಿ ಕಲಬುರ್ಗಿ ಜಿಲ್ಲೆಯನ್ನು ಅಕ್ರಮ ದಂಧೆಕೋರರ ಸುರಕ್ಷಿತ ತಾಣವಾಗಿಸಿ ಜಿಲ್ಲೆಯ ಹೆಸರನ್ನು ಮಣ್ಣು ಪಾಲು ಮಾಡಲಾಗಿತ್ತು. ಅದರೆ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಂತ ದುರವಸ್ಥೆಯನ್ನು ಬದಲಿಸುವ ಕೆಲಸ ನಡೆಯುತ್ತಿದ್ದು ಜನರಿಗೆ ಕಾನೂನಿನ ಮೇಲೆ ನಂಬಿಕೆ ಮೂಡಿಸಲಾಗುತ್ತಿದೆ ಎಂದು ಅವರು ಬರೆದಿದ್ದಾರೆ.

Join Whatsapp
Exit mobile version