ಮೈಸೂರು: ನಾಯಕತ್ವ ಬದಲಾವಣೆಯೇ ಬಿಜೆಪಿಗೆ ಇರುವ ದೊಡ್ಡ ಶಕ್ತಿ ಎಂದು ಬಿಜೆಪಿ ರಾಷ್ಟ್ರೀಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಲಿ ಶಾಸಕರು, ಕುಟುಂಬ ಸದಸ್ಯರನ್ನು ಹೊರಗಿಟ್ಟು ಚುನಾವಣೆ ಎದುರಿಸುವ ಬಿಜೆಪಿ ತಂತ್ರಕ್ಕೆ ಫಲ ಸಿಕ್ಕಿದೆ. ಬಿಜೆಪಿಯು ಕೆಲವೆಡೆ ಅಧಿಕಾರಕ್ಕೆ ಬರಲು ಹೊಸ ಮುಖಗಳ ಪರಿಚಯವೇ ಕಾರಣ. ದೆಹಲಿ ಪಾಲಿಕೆ ಎಲೆಕ್ಷನ್ ನಲ್ಲಿ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಿಲ್ಲ. ಗುಜರಾತ್ ಪಾಲಿಕೆಗಳಲ್ಲೂ ಟಿಕೆಟ್ ಪಡೆದ ಹೊಸಬರು ಗೆಲುವು ಸಾಧಿಸಿದ್ದಾರೆ. ಬಿಜೆಪಿಯಲ್ಲಿ ಮಾತ್ರ ಇಂತಹ ಪ್ರಯೋಗಗಳು ನಡೆಯುತ್ತವೆ ಎಂದು ಹೇಳಿದರು.
ಕಾರ್ಯಕರ್ತರ ಸಭೆಯಲ್ಲಿ ಬಿ.ಎಲ್.ಸಂತೋಷ್ ನೀಡಿರುವ ಹೇಳಿಕೆಯು ಕುತೂಹಲ ಮೂಡಿಸಿದೆ.