ಆಪರೇಷನ್ ಕಮಲಕ್ಕೆ 1,000‌ ಕೋಟಿ ತಂದಿಟ್ಟ ಬಿಜೆಪಿ: ಪ್ರಿಯಾಂಕ್ ಖರ್ಗೆ

Prasthutha|

ಬೆಂಗಳೂರು: ಹೈಕಮಾಂಡ್‍ನಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವವರು ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈಕಾಲು ಹಿಡಿದು ಒಂದು ಸಾವಿರ ಕೋಟಿ ರೂಪಾಯಿ ತಂದಿದ್ದು, ಅದನ್ನು ಇಲ್ಲಿ ಆಪರೇಷನ್ ಕಮಲ ನಡೆಸಲು ಬಳಕೆ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಹೇಳಿಕೆ ನೀಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ನಡೆದ ಬೋಜನ ಕೂಟದಲ್ಲಿ ಮುದ್ದೆ ಬಗ್ಗೆ ಚರ್ಚೆಯಾಗಿದೆ, ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸಭೆಯಲ್ಲೇ ಇದ್ದವರು ಹೇಳುತ್ತಿದ್ದಾರೆ. ರಾಜಕೀಯ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಯಾಗಲಿ, ಉಪಮುಖ್ಯಮಂತ್ರಿಯಾಗಲಿ ಅಥವಾ ಸಭೆಯಲ್ಲಿ ಸಚಿವರಾಗಲಿ ಹೇಳುತ್ತಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿಯವರು ಕಲ್ಪನೆ ಮಾಡಿಕೊಂಡು ಮಾತನಾಡುತ್ತಿದ್ದಾರೆ. ಡೈನಿಂಗ್ ಟೆಬಲ್‍ನಲ್ಲಿ ನಡೆದಿದ್ದು ಬಿಜೆಪಿಯವರಿಗೆ ಹೇಗೆ ಗೋತ್ತು ಎಂದು ಖರ್ಗೆ ಪ್ರಶ್ಮಿ ಸಿದರು.

- Advertisement -

ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಬಿಜೆಪಿಯವರಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ಅಸ್ತಿತ್ವದಲ್ಲಿ ಇರಬೇಕು ಎಂದು ತಲೆ ಬುಡ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಬಿಜೆಪಿಯವರಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ಅಸ್ತಿತ್ವದಲ್ಲಿ ಇರಬೇಕು ಎಂದು ತಲೆ ಬುಡ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ.
ಆಪರೇಷನ್ ಕಮಲ ನಡೆಸಿ ರಾಜ್ಯ ಸರ್ಕಾರವನ್ನು ಪತನ ಗೊಳಿಸಲು ಬಿಜೆಪಿ ಸಂಚು ನಡೆಸು ತ್ತಿರುವುದು ಗುಟ್ಟೇನು ಅಲ್ಲ. ಎಲ್ಲಿ ಸ್ಪಷ್ಟ ಬಹುಮತ ಬರುವುದಿಲ್ಲವೋ ಅಲ್ಲೆಲ್ಲಾ ಆಪರೇಷನ್ ಕಮಲ ಮಾಡುತ್ತಾರೆ. ಅದೇನು ಗಾಂ ತತ್ವದ ಮೇಲೆ ನಡೆಯುತ್ತದೆಯೇ ? ಹಣ ಕೊಟ್ಟು ಶಾಸಕರನ್ನು ಸೆಳೆಯುತ್ತಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ತೊರೆದು ಪಕ್ಷಾಂತರ ಮಾಡಿದವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿ ಉಳಿದುಕೊಂಡಿದ್ದರೆ. ಸಚಿವರಾಗಿರಲಿಲ್ಲ, ಆಪರೇಷನ್ ಕಮಲದಿಂದ ಪಡೆದ ಹಣದಿಂದ ಚುನಾವಣೆ ನಡೆಸಿ ಗೆದ್ದು ಬರಲಿಲ್ಲವೇ ಎಂದು ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು.



Join Whatsapp