Home ಟಾಪ್ ಸುದ್ದಿಗಳು ರಾಹುಲ್​ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಕ್ರಿಮಿನಲ್​ ಪ್ರಕರಣಗಳು!

ರಾಹುಲ್​ ಗಾಂಧಿ ವಿರುದ್ಧದ ಬಿಜೆಪಿ ಅಭ್ಯರ್ಥಿ ಮೇಲಿದೆ 242 ಕ್ರಿಮಿನಲ್​ ಪ್ರಕರಣಗಳು!

ವಯನಾಡು: ಲೋಕಸಭಾ ಚುನಾವಣಾ ಕಣದಲ್ಲಿ ಘಟಾನುಘಟಿ ನಾಯಕರ ಕ್ಷೇತ್ರಗಳ ಹಣಾಹಣಿ ಕೂತುಹಲ ಮೂಡಿಸಿದೆ. ಕೇರಳದ ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮತ್ತೆ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಬಿಜೆಪಿ ಬರೋಬ್ಬರಿ 242 ಕ್ರಿಮಿನಲ್​ ಪ್ರಕರಣಗಳು ಇರುವ ವ್ಯಕ್ತಿಯನ್ನು ಕಣಕ್ಕಿಳಿಸಿದೆ. ಈ ಅಂಶ ಕಾಂಗ್ರೆಸ್ಸಿಗರಿಗೆ ದೊಡ್ಡ ಅಸ್ತ್ರ ಆಗುತ್ತಿದೆ ಎನ್ನಲಾಗುತ್ತಿದೆ.

ರಾಹುಲ್​ ಗಾಂಧಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳಿವೆ.

ಚುನಾವಣಾ ನಿಯಮಗಳು, ಚುನಾವಣಾ ಆಯೋಗದ ಆದೇಶದ ಪ್ರಕಾರ ಲೋಕಸಭಾ ಅಭ್ಯರ್ಥಿಗಳು ತಮ್ಮ ಮೇಲೆ ಯಾವುದೇ ಕ್ರಿಮಿನಲ್​ ಕೇಸ್​ ಇದ್ದರು ಅದರ ಮಾಹಿತಿಯನ್ನು ಬಹಿರಂಗಗೊಳಿಸಬೇಕು. ಅಭ್ಯರ್ಥಿಗಳ ವಿರುದ್ಧದ ಪ್ರಕರಣಗಳ ವಿವರಗಳನ್ನು ಪ್ರಕಟಿಸುವುದು ಕಡ್ಡಾಯವಾಗಿದೆ ಹಾಗಾಗಿ ಸುರೇಂದ್ರನ್ ಅವರು ಇತ್ತೀಚೆಗೆ ತಮ್ಮ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯಲ್ಲಿ ಮೂರು ಪೂರ್ಣ ಪುಟಗಳಲ್ಲಿ ಪ್ರಕಟಿಸಿದ್ದಾರೆ.

ಏಪ್ರಿಲ್​ 19ರಂದು ಮೊದಲ ಹಂತದ ಚುನಾವಣೆ ಆರಂಭವಾಗಲಿದ್ದು, ಜೂನ್​ 1ರಂದು ಕೊನೆಯ 7ನೇ ಹಂತದ ಮತದಾನ ನಡೆಯಲಿದೆ. ಜೂನ್​ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

Join Whatsapp
Exit mobile version