ಮತದಾನದ ಮರುದಿನ ಬಿಜೆಪಿ ಅಭ್ಯರ್ಥಿ ನಿಧನ

Prasthutha|

ಲಖನೌ: ಶುಕ್ರವಾರ ಮೊದಲ ಹಂತದ ಮತದಾನ ನಡೆದ ಉತ್ತರ ಪ್ರದೇಶದ ಮೊರಾದಾಬಾದ್​ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾವನ್ನಪ್ಪಿದ್ದಾರೆ. ಮಾಜಿ ಸಂಸದರೂ ಆದ ಕುನ್ವರ್ ಸರ್ವೇಶ್ ತಾನು ನಿಂತ ಕ್ಷೇತ್ರದ ಮತದಾನವಾದ ಮರುದಿನವೇ ಹೃದಯಾಘಾತದಿಂದ ನವದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

- Advertisement -

ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಯುಪಿ ಸಿಎಂ ಯೋಗಿ ಆದಿತ್ಯನಾಥ್​ ಆಘಾತ ವ್ಯಕ್ತಪಡಿಸಿದ್ದಾರೆ. ಇದು ಪಕ್ಷಕ್ಕೆ ಭರಿಸಲಾಗದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹ ಸರ್ವೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದು,ಸರ್ವೇಶ್ ಅವರು ತಳಮಟ್ಟದ ನಾಯಕರಾಗಿದ್ದರು, ಬಿಜೆಪಿಯನ್ನು ಬಲಪಡಿಸಲು ಶ್ರಮಿಸಿದ್ದಾರೆ ಎಂದು X​ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

- Advertisement -

Join Whatsapp