ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ

Prasthutha|

ಸೂರತ್ ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಗುಜರಾತ್ ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ.

- Advertisement -


ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ನಿನ್ನೆ ಸೂರತ್ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ಅವರ ಫಾರಂ ರದ್ದಾಗಿದೆ. ಅದರ ನಂತರ ಎಲ್ಲಾ ಸ್ವತಂತ್ರ ಅಭ್ಯರ್ಥಿಗಳು ಇಂದು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗಾಗಿ ಮುಖೇಶ್ ದಲಾಲ್ ಅವಿರೋಧವಾಗಿ ಸಂಸದನಾಗಿ ಆಯ್ಕೆಯಾಗಿದ್ದಾರೆ.


ಸೂರತ್ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧದ 8 ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ. ಹಾಗಾಗಿ ಬಿಜೆಪಿಯ ಮುಖೇಶ್ ದಲಾಲ್ ಅವರನ್ನು ಅವಿರೋಧವಾಗಿ ಘೋಷಿಸಲಾಗಿದೆ. ಬಿಜೆಪಿಯ ಮುಖೇಶ್ ದಲಾಲ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

Join Whatsapp