ಬೆಂಗಳೂರು: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯಿಂದ ಸಾಧ್ಯವಾಗದು. ಬಿಜೆಪಿಯ ಹಣೆಬರಹದಲ್ಲೇ ಅದು ಬರೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಗ್ಯಾರಂಟಿ ಮುಂದುವರಿಯಲ್ಲ ಎಂದು ಬಿಜೆಪಿಯವರು ಹೇಳ್ತಿದ್ದಾರೆ. ಆದರೆ, ಅವರ ಹಣೆಬರಹದಲ್ಲಿ ಗ್ಯಾರಂಟಿ ತೆಗೆಯಲು ಸಾಧ್ಯವಿಲ್ಲ. ಬಿಎಸ್ ಯಡಿಯೂರಪ್ಪ, ಅಶೋಕ್, ವಿಜಯೇಂದ್ರ ಎಲ್ಲರಿಗೂ ಈ ಮಾತನ್ನು ಹೇಳುತ್ತಿದ್ದೇನೆ ಎಂದರು. ಸೋಲಿನ ಭಯದಿಂದಲೇ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.
ನಮ್ಮ ಕಾರ್ಯಕ್ರಮ ಬಿಜೆಪಿಯನ್ನು ತೊಳೆಯುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಗ್ಯಾರಂಟಿಯ ಪರ ದೊಡ್ಡ ಅಲೆ ಇದೆ ಎಂದು ಡಿಕೆ ಶಿವಕುಮಾರ್ ಹೇಳಿದರು.