Home ಟಾಪ್ ಸುದ್ದಿಗಳು ಕೆಫೆ ಸ್ಫೋಟ | ಬಿಜೆಪಿ, ಕಾಂಗ್ರೆಸ್ ನಾಯಕರು ಬಾಯಿ ಮುಚ್ಚಿಕೊಂಡಿರಲಿ: ಮುತಾಲಿಕ್

ಕೆಫೆ ಸ್ಫೋಟ | ಬಿಜೆಪಿ, ಕಾಂಗ್ರೆಸ್ ನಾಯಕರು ಬಾಯಿ ಮುಚ್ಚಿಕೊಂಡಿರಲಿ: ಮುತಾಲಿಕ್

ಕಾರವಾರ: ಬೆಂಗಳೂರು ಬಾಂಬ್ ಸ್ಪೋಟ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿ, ಕಾಂಗ್ರೆಸ್ ನಾಯಕರು ಬಾಯಿ ಮುಚ್ಚಿಕೊಂಡಿರಲಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳ ಹೇಳಿಕೆಗಳು ತನಿಖೆಯ ದಾರಿ ತಪ್ಪಿಸಲಿದೆ. ಬಿಜೆಪಿ ಅವಧಿಯಲ್ಲಿಯೂ ಸ್ಫೋಟ ನಡೆದಿತ್ತು. ಕಾಂಗ್ರೆಸ್ ಅವಧಿಯಲ್ಲೂ ನಡೆದಿದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯದ ಪರಿಣಾಮವೇ ಪದೇ ಪದೇ ಬಾಂಬ್ ಸ್ಫೋಟಕ್ಕೆ ಕಾರಣ ಎಂದರು. ರಾಜ್ಯ ಸರ್ಕಾರದ ಬದಲು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕು. ಪೊಲೀಸರ ಮೇಲೆ ಆಡಳಿತ ಪಕ್ಷ ಒತ್ತಡ ತರುತ್ತದೆ. ಅದರಿಂದ ತನಿಖೆಯ ದಾರಿ ತಪ್ಪುತ್ತದೆ ಎಂದರು.

Join Whatsapp
Exit mobile version