ಬಿಜೆಪಿ, ಕಾಂಗ್ರೆಸ್ ತೊರೆದು ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ಜೆಡಿಎಸ್ ಸೇರಿದ ಕಾರ್ಯಕರ್ತರು

Prasthutha|

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್ ನ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ರೇವಣಸಿದ್ದಪ್ಪ ಸಿರಕಟನಳ್ಳಿರವರ ಮುಂದಾಳತ್ವದಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

- Advertisement -

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸಕ್ಕೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ ಕಾರ್ಯಕರ್ತರಿಗೆ ಜೆಡಿಎಸ್ ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಸ್ವಾಗತಿಸಿದರು. ಈ ವೇಳೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಡವರ, ರೈತರ, ಶ್ರಮಿಕರ ಪರವಾಗಿರುವ ಪಕ್ಷವಾಗಿದೆ. ಪಕ್ಷವನ್ನು ಇನ್ನಷ್ಟ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಾಗಿದೆ.

ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿರವರು ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಕ್ಷವನ್ನು ಬಲಿಷ್ಠಗೊಳಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಮುಖಂಡರು, ಕಾರ್ಯಕರ್ತರು ಪಕ್ಷವನ್ನು ಸಂಘಟಿಸಬೇಕಾಗಿದೆ. ಕಾರ್ಯಕರ್ತರು ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಸಾಗಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

- Advertisement -

ಈ ಸಂದರ್ಭದಲ್ಲಿ ಪ್ರಮುಖರಾದ ಶಿವ ಹಳೆಂಬರ್, ಮಡೆಪ್ಪ ಸ್ವಾಮಿ, ರಾಘವೇಂದ್ರ ಜೋಷಿ, ಮಲ್ಲು ಜೋಷಿ, ನಾಗು ಗೌರೆ, ಸಚಿನ್ ಅಮ್ಮ, ನವೀನ್ ಅಮ್ಮ, ಅಮಿತ್ ಅಮ್ಮ, ಫಿರಪ್ಪ ಕಮಠಾಣಾ, ಸಚಿನ್ ತಾಳಮಡಗಿ, ಹಮ್ಮಿ ಪಟೇಲ್, ಅರವಿಂದ ದೇಸಾಯಿ, ಸಿದ್ದು ಹಳೆಂಬರ್, ಅಮರ್ ಗೋಗಿ, ಧನರಾಜ್ ಕೋಟೆ, ಅಪ್ಪು ದೇಸಾಯಿ ಸೇರಿದಂತೆ ಅನೇಕರಿದ್ದರು.

ರಂಜೋಳ್ ಖೇಣಿ ಯುವಕರು ಜೆಡಿಎಸ್ ಸೇರ್ಪಡೆ:

ಬಗದಲ್ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾದ ಬಳಿಕ, ರಂಜೋಳ್ ಖೇಣಿ ಗ್ರಾಮದ ಯುವಕರು ಶಾಸಕ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಶಿವಾನಂದ ಪತ್ರೆ, ಅಮೃತ್ ಮಡಿವಾಳ, ಮಲ್ಲಿಕಾರ್ಜುನ ಮಡಿವಾಳ, ಪಾಷಾ ಬಾಯ್, ಪವನ್ ಮಡಿವಾಳ, ರಾಚಯ್ಯ ಡೊಣ್ಣಿ ಸೇರಿದಂತೆ ಅನೇಕರಿದ್ದರು.



Join Whatsapp