ಉಜಿರೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಎಂದಿದ್ದು ಬಿಜೆಪಿ ಕಾರ್ಯಕರ್ತ? | ವೀಡಿಯೊ ವೈರಲ್

Prasthutha|

ಮಂಗಳೂರು : ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ವೇಳೆ ಬೆಳ್ತಂಗಡಿಯ ಉಜಿರೆಯ ಮತ ಎಣಿಕೆ ಕೇಂದ್ರದ ಹೊರಗೆ, ವಿವಿಧ ಪಕ್ಷಗಳ ಕಾರ್ಯಕರ್ತರ ವಿಜಯೋತ್ಸವ ನಡುವೆ ಕೇಳಿಬಂದಿದ್ದ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಬಿಜೆಪಿ ಕಾರ್ಯಕರ್ತರಿಂದಲೇ ಕೂಗಲ್ಪಟ್ಟಿದ್ದು ಎನ್ನಲಾದ ವೀಡಿಯೊವೊಂದು ವೈರಲ್ ಆಗಿದೆ.

- Advertisement -

ವಿಜಯೋತ್ಸವ ವೇಳೆ ಎಸ್ ಡಿಪಿಐ ಕಾರ್ಯಕರ್ತರು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದರು ಎಂದು ಈ ಮೊದಲು ಆಪಾದಿಸಲಾಗಿದ್ದು, ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ. ಕೆಲವು ಟಿವಿ ವಾಹಿನಿಗಳೂ ಈ ಬಗ್ಗೆ ವರದಿ ಮಾಡಿ, ಎಸ್ ಡಿಪಿಐ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದವು.

ಆದರೆ, ಇದೀಗ ಹೊಸ ವೀಡಿಯೊವೊಂದು ವೈರಲ್ ಆಗಿದ್ದು, ಈ ವೀಡಿಯೊದಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುತ್ತಿರುವುದು ಕೇಳಿಬಂದಿದೆ ಎಂದು ಕೆಲವು ಸುದ್ದಿವಾಹಿನಿಗಳ ವರದಿಗಳು ತಿಳಿಸಿವೆ.

- Advertisement -

ಹೀಗಾಗಿ, ಇದೀಗ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಯಾವಾಗ ಕ್ರಮ ಕೈಗೊಳ್ಳುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಪ್ರಶ್ನಿಸಲಾರಂಭಿಸಿದ್ದಾರೆ.    



Join Whatsapp