ಬಿಜೆಪಿ ಕೋರ್ ಕಮಿಟಿ ಸಭೆ ಕೊನೇ ಕ್ಷಣದಲ್ಲಿ ರದ್ದು

Prasthutha|

ಬೆಂಗಳೂರು: ಇಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕೊನೇ ಕ್ಷಣದಲ್ಲಿ ರದ್ದಾಗಿದೆ ಎಂದು ತಿಳಿದುಬಂದಿದೆ.

- Advertisement -


ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ನಿಗದಿಯಾಗಿತ್ತು. ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇತ್ತು. ಆದರೆ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.


ಸಭೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ರಾಜ್ಯದ ಪ್ರಭಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವ ಆರ್. ಅಶೋಕ್ ಅವರು ಭಾಗವಹಿಸಿ ಸಭೆಯಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು. ಆದರೆ ಇದೀಗ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಏಕಾಏಕಿ ರದ್ದಾಗಿದ್ದು ಕುತೂಹಲ ಮೂಡಿಸಿದೆ.

Join Whatsapp