ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಕಸರತ್ತು: ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ

Prasthutha|

ಬೆಂಗಳೂರು: ಉಪಚುನಾವಣೆ ಅಭ್ಯರ್ಥಿ ಅಯ್ಕೆ ಸಂಬಂಧ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ನಾಳೆ ಮಧ್ಯಾಹ್ನ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -


ಕೋರ್ ಕಮಿಟಿಯಲ್ಲಿ ಹೆಸರು ಅಂತಿಮಗೊಳಿಸಿ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿಕೊಡುತ್ತೇವೆ. ಎರಡೂ ಕ್ಷೇತ್ರಗಳಲ್ಲಿ ಭಾರಿ ಅಂತರದಲ್ಲಿ ಸಾಧಿಸುತ್ತೇವೆ. ನಾಳೆಯ ಸಭೆಯಲ್ಲಿ ಉಪಚುನಾವಣೆ ಉಸ್ತುವಾರಿಗಳನ್ನು ಸಹ ನೇಮಕ ಮಾಡಲಾಗುವುದು ಎಂದರು.
ಶಿವಕುಮಾರ್ ಉದಾಸಿ ಪತ್ನಿಗೆ ಟಿಕೆಟ್ ನೀಡುವ ಬಗ್ಗೆ ಒತ್ತಡವಿದೆಯೇ ಎಂದು ಕೇಳಿದ ಪ್ರಶ್ನೆಗೆ, ಈಗಾಗಲೇ ಹಾನಗಲ್ ನಲ್ಲಿ ಸಭೆ ನಡೆಸಲಾಗಿದೆ. ನಾಳೆಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.



Join Whatsapp