ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Prasthutha|

ನವದೆಹಲಿ: ದೆಹಲಿ ಅಬಕಾರಿ ನೀತಿ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.

- Advertisement -


ನಗರದ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣದ ಬಳಿ ಜಮಾಯಿಸಿದ್ದ ಬಿಜೆಪಿ ಮುಖಂಡರು ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ಘೋಷಣೆಗಳನ್ನು ಕೂಗುತ್ತ ದೆಹಲಿ ಸೆಕ್ರೆಟರಿಯೇಟ್ ಕಡೆಗೆ ಸಾಗಿದರು.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಆದ್ದರಿಂದ ಅವರು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಮತ್ತು ತಮ್ಮ ಜವಾಬ್ದಾರಿಯನ್ನು ಬೇರೆಯವರಿಗೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಸಂಸದ ಹರ್ಷವರ್ಧನ್ ಒತ್ತಾಯಿಸಿದ್ದಾರೆ.



Join Whatsapp