ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚನೆ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ನೀಡಲಾಗಿದೆ.
ಪಕ್ಷದವರ ವಿರುದ್ದವೇ ಬಹಿರಂಗ ಹೇಳಿಕೆ ಹಿನ್ನೆಲೆ ವಿವರಣೆ ನೀಡುವಂತೆ ನೊಟೀಸ್ ಜಾರಿ ಮಾಡಲಾಗಿದೆ.