ಕೋವಿಡ್ ನಿಯಮ ಉಲ್ಲಂಘಿಸಿ ಬಿಜೆಪಿ ಜಿಲ್ಲಾಧ್ಯಕ್ಷನ ಬರ್ತಡೇ ಪಾರ್ಟಿ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

Prasthutha|

ಹಾಸನ: ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಈ ಮಧ್ಯೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷನ ಹುಟ್ಟುಹಬ್ಬ ನಡೆದಿದೆ.

ರಾತ್ರಿ ನೈಟ್ ಕರ್ಫ್ಯೂ ನಡುವೆಯೂ ಅಭಿಮಾನಿಗಳು ಡಿಜೆ ಪಾರ್ಟಿ ಮಾಡಿದ್ದು, ಈ ವೇಳೆ ಟ್ರಾಫಿಕ್ ಜಾಮ್ ಆಗಿತ್ತು. ಮಾಸ್ಕ್, ಸ್ಯಾನಿಟೈಜರ್ ಇಲ್ಲದೆ ಬೇಕಾಬಿಟ್ಟಿಯಾಗಿ ಬಿಜೆಪಿ ಕಾರ್ಯಕರ್ತರು ವರ್ತಿಸಿದ್ದಾರೆ. ಆಡಳಿತ ಪಕ್ಷದ ಅಧ್ಯಕ್ಷರಾಗಿ ಬೇಜವಾಬ್ದಾರಿ ವರ್ತನೆ ತೋರಿರುವುದರಿಂದ ಹುಲ್ಲಹಳ್ಳಿ ಸುರೇಶ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

- Advertisement -