ಪ್ರಧಾನಿ ದ್ವೇಷ ಭಾಷಣ ಮಾಡಬಾರದು ಎಂದ ಬಿಜೆಪಿ ಜಿಲ್ಲಾಧ್ಯಕ್ಷ: ಪಕ್ಷದಿಂದ ಉಚ್ಚಾಟನೆ

Prasthutha|

ರಾಜಸ್ಥಾನ: ಪ್ರಧಾನಿಯವರ ಈ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ಪ್ರತಿಕ್ರಿಯಿಸಿದಕ್ಕಾಗಿ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

- Advertisement -

ರಾಜಸ್ಥಾನ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಜೆಪಿಯ ವರ್ಚಸ್ಸು ಹಾಳು ಮಾಡಿದ್ದಕ್ಕಾಗಿ, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಉಸ್ಮಾನ್ ಘನಿ ಅವರನ್ನು ಪಕ್ಷದ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್‌ ಲೋಕಸಭಾ ಚುನಾವಣೆ ಸಂಬಂಧವಾಗಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ಜನರ ನಡುವೆ ನಡೆಸುತ್ತಿದ್ದರು. ಈ ವೇಳೆ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಸ್ಮಾನ್ ಘನಿ ಅವರನ್ನು ಮಾತನಾಡಿಸಲಾಗಿತ್ತು.

- Advertisement -

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ಅಭಿಪ್ರಾಯ ಕೇಳಿದಾಗ ಉಸ್ಮನ್ ಘನಿ, ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ ಎಂದು ಪ್ರತಿಕ್ರಿಯಿಸಿದ್ದರು.

Join Whatsapp