‘ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’: ಮುಖ್ಯಮಂತ್ರಿ ಸಿದ್ದರಾಮಯ್ಯ

Prasthutha|

ಮೈಸೂರು: ‘ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ..‘ಆ ಬಗ್ಗೆ ಎಷ್ಟು ಸಲ ಹೇಳುವುದು’ ಎಂದು ಗರಂ ಆದರು.


‘ಮುಡಾದಿಂದ ಶೇ 50:50 ಅನುಪಾತದಡಿ ನಿವೇಶನ ಹಂಚಿಕೆ ಮಾಡದಂತೆ 2019ರಲ್ಲೇ ಆದೇಶಿಸಲಾಗಿದೆ. ಅದಾದ ಮೇಲೂ ಕೆಲವರಿಗೆ ನಿವೇಶನ ನೀಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟಿದ್ದನ್ನು ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆ. ಅದು ವಿವಾದದ ವಿಷಯವೇ ಅಲ್ಲ. ಎಲ್ಲವೂ ಕಾನೂನು ಬದ್ಧವಾಗಿಯೇ ನಡೆದಿದೆ’ ಎಂದು ಸಮರ್ಥಿಸಿಕೊಂಡರು. ‘ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣಕ್ಕೋಸ್ಕರ ಪ್ರತಿಭಟಿಸುತ್ತಿದ್ದಾರೆ’ ಎಂದು ದೂರಿದರು.

Join Whatsapp