Home ಟಾಪ್ ಸುದ್ದಿಗಳು ‘ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’: ಮುಖ್ಯಮಂತ್ರಿ ಸಿದ್ದರಾಮಯ್ಯ

‘ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ‘ಜುಲೈ 15ರಿಂದ ವಿಧಾನಮಂಡಲ ಅಧಿವೇಶನ ಆರಂಭಗೊಳ್ಳಲಿದ್ದು, ಮುಡಾ ಹಗರಣದ ಬಗ್ಗೆ ಪ್ರಸ್ತಾಪವಾದರೆ ಉತ್ತರ ಕೊಡುತ್ತೇನೆ. ಆದರೆ, ನನ್ನ ಪತ್ನಿ ವಿಷಯದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ..‘ಆ ಬಗ್ಗೆ ಎಷ್ಟು ಸಲ ಹೇಳುವುದು’ ಎಂದು ಗರಂ ಆದರು.


‘ಮುಡಾದಿಂದ ಶೇ 50:50 ಅನುಪಾತದಡಿ ನಿವೇಶನ ಹಂಚಿಕೆ ಮಾಡದಂತೆ 2019ರಲ್ಲೇ ಆದೇಶಿಸಲಾಗಿದೆ. ಅದಾದ ಮೇಲೂ ಕೆಲವರಿಗೆ ನಿವೇಶನ ನೀಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ನನ್ನ ಪತ್ನಿಗೆ ಬದಲಿ ನಿವೇಶನ ಕೊಟ್ಟಿದ್ದನ್ನು ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆ. ಅದು ವಿವಾದದ ವಿಷಯವೇ ಅಲ್ಲ. ಎಲ್ಲವೂ ಕಾನೂನು ಬದ್ಧವಾಗಿಯೇ ನಡೆದಿದೆ’ ಎಂದು ಸಮರ್ಥಿಸಿಕೊಂಡರು. ‘ಈ ವಿಷಯದಲ್ಲಿ ಬಿಜೆಪಿಯವರು ರಾಜಕಾರಣಕ್ಕೋಸ್ಕರ ಪ್ರತಿಭಟಿಸುತ್ತಿದ್ದಾರೆ’ ಎಂದು ದೂರಿದರು.

Join Whatsapp
Exit mobile version