ಬಿಜೆಪಿ-ಜೆಡಿಎಸ್ ಮೈತ್ರಿ: ಕುಮಾರಸ್ವಾಮಿ ನಿವಾಸಕ್ಕೆ ಆಗಮಿಸಿದ ಕೆ.ಎಸ್ ಈಶ್ವರಪ್ಪ

Prasthutha|

- Advertisement -

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಶಾಸಕ ಕೆಎಸ್ ಈಶ್ವರಪ್ಪ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ಜೆಪಿ ನಗರದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಹೋರಾಡುವುದಕ್ಕೆ ಸ್ನೇಹ ಬೆಳೆಸಲು ಕಸರತ್ತು ನಡೆಸಿದ್ದಾರೆ.

- Advertisement -

ಈಶ್ವರಪ್ಪ ಅವರೊಂದಿಗೆ ಸಾ ರಾ ಮಹೇಶ್ ಆಗಮಿಸಿದ್ದಾರೆ.

ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಹೋಗಿರುವ ಪಕ್ಷದ ಹಿರಿಯ ಬಿಎಸ್ ಯಡಿಯೂರಪ್ಪ ಇಂದು ವರಿಷ್ಠರೊಂದಿಗೆ ಮೈತ್ರಿಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.