ಬೆಳಗಾವಿ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣ ಭಾರತದಿಂದ ಪಲಾಯನ ಮಾಡಲು ಅನುಕೂಲ ಮಾಡಿಕೊಟ್ಟಿದೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇತ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಮಾಹಿತಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮೊದಲೇ ಗೊತ್ತಿತ್ತು. 2023ರ ಡಿಸೆಂಬರ್ನಲ್ಲೇ ಈ ವಿಷಯ ಗಮನಕ್ಕೆ ತಂದ ಸ್ಥಳೀಯ ಬಿಜೆಪಿ ನಾಯಕರು, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳದಂತೆ ಎಚ್ಚರಿಕೆ ಕೊಟ್ಟಿದ್ದರು. ಆದರೂ, ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಲು ಪ್ರಜ್ವಲ್ಗೆ ಟಿಕೆಟ್ ನೀಡಲಾಯಿತು ಎಂದು ದೂರಿದರು.