Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಹೇಳಿಕೆ: ಯತೀಂದ್ರ, ತಂಗಡಗಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಹೇಳಿಕೆ: ಯತೀಂದ್ರ, ತಂಗಡಗಿ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.


ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯ ಹಾಗೂ ಮೇಲ್ಮನೆ ಸದಸ್ಯ ರವಿಕುಮಾರ್ ಮತ್ತು ಛಲವಾದಿ ನಾರಾಯಣಸ್ವಾಮಿ ಈ ಸಂಬಂಧ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ದೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಉಲಂಘಿಸಿದ ಇಬ್ಬರು ನಾಯಕರನ್ನು ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Join Whatsapp
Exit mobile version