ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.
ಸಾರ್ವಜನಿಕ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಪನೌಟಿ (ಕೆಟ್ಟ ಶಕುನ) ಮತ್ತು ಜೈಬ್ ಕತ್ರಾ (ಪಿಕ್ ಪಾಕೆಟ್) ಎಂದು ಕರೆದಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
ಭಾನುವಾರ ನಡೆದ ವಿಶ್ವಕಪ್ ಪೈನಲ್ ಪಂದ್ಯದಲ್ಲಿ ಭಾರತ ಸೋಲಿ ಕಂಡಿತು. ಈ ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಹೋಗಿರುವುದನ್ನು ಉಲ್ಲೇಖಿಸಿ ಮೋದಿಯನ್ನು ಕೆಟ್ಟ ಶಕುನ ಎಂದು ಕರೆದರು.