Home ಟಾಪ್ ಸುದ್ದಿಗಳು ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಿದ್ದು, ನಟ ಶಿವರಾಜ್ಕುಮಾರ್ ಅವರು ಪತ್ನಿ ಗೀತಾ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ.


ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರ ಸಿನಿಮಾ, ಜಾಹೀರಾತು ಹಾಗೂ ಬಿಲ್ ಬೋರ್ಡ್ ಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ಭಾರತೀಯ ಜನತಾ ಪಾರ್ಟಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ದೂರು ನೀಡಲಾಗಿದೆ. ಮೋರ್ಚಾದ ಅಧ್ಯಕ್ಷ ಆರ್. ರಘು ಅವರು ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.


‘ರಾಜ್ಯದಲ್ಲಿ ಪ್ರಭಾವಿ ವ್ಯಕ್ತಿ ಆಗಿರುವ ಶಿವರಾಜ್ ಕುಮಾರ್ ಅವರು ರಾಜ್ಯದ್ಯಂತ ಕಾಂಗ್ರೆಸ್ ಪಕ್ಷದ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಅವರು ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್ಕುಮಾರ್ ಅವರ ಸಿನಿಮಾ, ಜಾಹೀರಾತು, ಬಿಲ್ ಬೋರ್ಡ್ ಗಳನ್ನು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್, ಸೋಶಿಯಲ್ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ’ ಎಂದು ರಘು ಅವರು ಪತ್ರ ಬರೆದಿದ್ದಾರೆ.

Join Whatsapp
Exit mobile version