ಎಲ್ಲರಿಗೂ ಉಚಿತ ಲಸಿಕೆಯೆನ್ನುತ್ತಾ ಬಿಜೆಪಿ ಜನರನ್ನು ಮೋಸಗೊಳಿಸುತ್ತಿದೆ : ಕಾಂಗ್ರೆಸ್ ಪ್ರತಿಭಟನೆ

Prasthutha|

ಮಂಗಳೂರು : ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ ಎಂಬುವುದನ್ನು ಕೇಂದ್ರ ಸರ್ಕಾರ ಪ್ರಚಾರ ಮಾಡುತ್ತಿದೆ. ಆದರೆ ವಾಸ್ತವ ಹೇಗಿದೆ ಅಂದರೆ ಉಚಿತವಾಗಿ ನೀಡಬೇಕಾದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಮೂಲಕ 850 ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ‌ ಕಾಂಗ್ರೆಸ್ ಪಕ್ಷವು ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು.

- Advertisement -

ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಇರೋ ಉಚಿತ ಲಸಿಕೆಯ ಜಾಹೀರಾತಿನ ಕೆಳಗಡೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕೋವಿಡ್ 19 ಹೆಲ್ಪ್ ಲೈನ್ ವತಿಯಿಂದ ಪ್ರತಿಭಟನೆ ನಡೆಯಿತು.

ಈ ಪ್ರತಿಭಟನೆಯಲ್ಲಿ ಸಂಚಾಲಕ ಐವನ್ ಡಿಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.‌ ಇದೇ ವೇಳೆ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು
ಉಪಸ್ಥಿತರಿದ್ದರು.



Join Whatsapp