Home ಕರಾವಳಿ ಎಲ್ಲರಿಗೂ ಉಚಿತ ಲಸಿಕೆಯೆನ್ನುತ್ತಾ ಬಿಜೆಪಿ ಜನರನ್ನು ಮೋಸಗೊಳಿಸುತ್ತಿದೆ : ಕಾಂಗ್ರೆಸ್ ಪ್ರತಿಭಟನೆ

ಎಲ್ಲರಿಗೂ ಉಚಿತ ಲಸಿಕೆಯೆನ್ನುತ್ತಾ ಬಿಜೆಪಿ ಜನರನ್ನು ಮೋಸಗೊಳಿಸುತ್ತಿದೆ : ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ ಎಂಬುವುದನ್ನು ಕೇಂದ್ರ ಸರ್ಕಾರ ಪ್ರಚಾರ ಮಾಡುತ್ತಿದೆ. ಆದರೆ ವಾಸ್ತವ ಹೇಗಿದೆ ಅಂದರೆ ಉಚಿತವಾಗಿ ನೀಡಬೇಕಾದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳ ಮೂಲಕ 850 ರೂಪಾಯಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ‌ ಕಾಂಗ್ರೆಸ್ ಪಕ್ಷವು ಮಂಗಳೂರಲ್ಲಿ ಪ್ರತಿಭಟನೆ ನಡೆಸಿತು.

ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಇರೋ ಉಚಿತ ಲಸಿಕೆಯ ಜಾಹೀರಾತಿನ ಕೆಳಗಡೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕೋವಿಡ್ 19 ಹೆಲ್ಪ್ ಲೈನ್ ವತಿಯಿಂದ ಪ್ರತಿಭಟನೆ ನಡೆಯಿತು.

ಈ ಪ್ರತಿಭಟನೆಯಲ್ಲಿ ಸಂಚಾಲಕ ಐವನ್ ಡಿಸೋಜಾ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.‌ ಇದೇ ವೇಳೆ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು
ಉಪಸ್ಥಿತರಿದ್ದರು.

Join Whatsapp
Exit mobile version