ಹೈದರಾಬಾದ್: ತೆಲಂಗಾಣ ರಾಜಕೀಯದಲ್ಲಿ ಭಾರಿ ಬೆಳವಣಿಗೆಗಳು ನಡೆಯುತ್ತಿದ್ದು, ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷಕ್ಕೆ ಬಿಜೆಪಿ ಬಿಗ್ ಶಾಕ್ ನೀಡಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನಸೇನಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದಾರೆ.
ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಪಕ್ಷ ಅಟ್ಟರ್ ಅಟ್ಟರ್ ಪ್ಲಾಪ್ ಆಗಿತ್ತು. ಅದೇ ರೀತಿ ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲೂ ಪವನ್ ಕಲ್ಯಾಣ್ ಪಾರ್ಟಿ ತೀರಾ ಕಲಪೆ ಸಾಧನೆ ಮಾಡಿದೆ. ಹೀಗಾಗಿ ಜನಸೇನಾದೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಆ ಪಕ್ಷಕ್ಕಿಂತ ನಮಗೆ ನಷ್ಟವಾಗಿದೆ ಎಂಬುದನ್ನು ಅರಿತುಕೊಂಡಿರುವ ಬಿಜೆಪಿ ನಾಯಕರು ಈ ಪ್ರಮುಖ ನಿರ್ಧಾರವನ್ನು ಕೈಗೊಂಡಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಏಕಾಂಗಿಯಾಗಿಯೇ ಸ್ಪರ್ಧೆ ಮಾಡಲು ಬಿಜೆಪಿ ನಾಯಕರು ನಿರ್ಧಾರ ಕೈಗೊಂಡಿದ್ದಾರೆ. ಈ ವಿಷಯವನ್ನು ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರೂ ಆಗಿರುವ ಕಿಶನ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.