ಬಿಜೆಪಿಯವರು ಪಕ್ಷಕ್ಕೆ ಸೇರಿಸಿಕೊಳ್ಳುವಾಗ ಜಾಮೂನು ಕೊಡ್ತಾರೆ, ನಂತರ ವಿಷ ಕೊಡ್ತಾರೆ: ಎಸ್ ಟಿ ಸೋಮಶೇಖರ್ ಅಸಮಾಧಾನ

Prasthutha|

ಮೈಸೂರು: ನಾನು ಯಡಿಯೂರಪ್ಪನವರ ಮಾತು ನಂಬಿ ಬಿಜೆಪಿಯಲ್ಲಿದ್ದೇನೆ. ಆದರೆ ಕೆಲವರು ನನ್ನನ್ನು ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೇ ನನ್ನ ವಿರುದ್ಧ ಕೆಲಸ ಮಾಡಿದರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ, ಆದರೂ ಯಾವುದೇ ರೀತಿಯ ಪ್ರಯೋಜನವಾಗಲಿಲ್ಲ ಎಂದು ಶಾಸಕ ಎಸ್.ಟಿ ಸೋಮಶೇಖರ್ ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.

- Advertisement -


ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷದಲ್ಲಿದ್ದವನು. ಅವರಾಗಿಯೇ ಬಿಜೆಪಿಗೆ ಸೇರಿಸಿಕೊಂಡರು. ಈಗ ಎಸ್ ಟಿ ಸೋಮಶೇಖರ್ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನು ಪಕ್ಷ ಬಿಡಿಸಲು ರೆಡಿಯಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.


ನಾನು ಕ್ಷೇತ್ರದ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಹತ್ತಿರ ಹೋಗುತ್ತೇನೆ. ಇದರಲ್ಲಿ ತಪ್ಪೇನಿದೆ?. ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಸಹಿಸುತ್ತಿಲ್ಲ. ನನ್ನ ಕಚೇರಿಯಿಂದ ಕಾಂಗ್ರೆಸ್ ಗ್ಯಾರಂಟಿ ಫಾಲೋ ಅಪ್ ಮಾಡಿದ್ದೇನೆ. ಇದರಿಂದ ನನ್ನ ಕ್ಷೇತ್ರದ ಜನರಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಯವರು ಅದೆಲ್ಲಾ ಕಾಂಗ್ರೆಸ್ ನ ಗ್ಯಾರಂಟಿ, ಅದಕ್ಕೆ ನೀವೇಕೆ ಉತ್ತೇಜನ ನೀಡುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.



Join Whatsapp