ಉತ್ತರ ಪ್ರದೇಶದಲ್ಲಿ ಬಿಜೆಪಿಯ ಗೂಂಡಾರಾಜ್| ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ಆಕ್ರೋಶ

Prasthutha|

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರಸಲ್ಲಿಸಲು ಹೋಗುತ್ತಿದ್ದ ಮಹಿಳೆಯೊಬ್ಬರ ಸೀರೆ ಎಳೆದು ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.  ಉತ್ತರಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ಹಿಂಸಾಚಾರವನ್ನು ‘ಮಾಸ್ಟರ್‌ ಸ್ಟ್ರೋಕ್‌’ ಎಂದು ಮರುನಾಮಕರಣ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ‘ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆ ನಾಮಪತ್ರ ಸಲ್ಲಿಸುವುದನ್ನು ತಡೆಯಲು ಬಿಜೆಪಿ ತನ್ನ ಎಲ್ಲ ಮಿತಿಯನ್ನೂ ದಾಟಿ ಹೋಗಿದೆ’ ಎಂದು ಆರೋಪಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯೊಬ್ಬರು, ಬಿಜೆಪಿ ಶಾಸಕರು ತನ್ನನ್ನು ಹಾಗೂ ತನ್ನ ಕುಟುಂಬವನ್ನು ಕೊಲ್ಲಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದರು. ಈಗ ಅದೇ ಬಿಜೆಪಿಯವರು, ಇಂದು ಚುನಾವಣೆಯಲ್ಲಿ ಮಹಿಳೆ ನಾಮಪತ್ರ ಸಲ್ಲಿಸುವುದನ್ನು ತಡೆಯಲು ಎಲ್ಲ ಮಿತಿಗಳನ್ನು ಮೀರುತ್ತಿದ್ದಾರೆ. ಅದೇ ಪಕ್ಷದ ಸರ್ಕಾರ, ಅದೇ ರೀತಿಯ ವರ್ತನೆ’ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಟ್ವೀಟ್‌ ಜತೆಗೆ ನಾಮಪತ್ರ ಸಲ್ಲಿಸುವ ವೇಳೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

- Advertisement -

ಬಿಜೆಪಿಯ ಕಾರ್ಯಕರ್ತರು ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಹೋಗುತ್ತಿದ್ದ ಮಹಿಳೆಯ ಸೀರೆಯನ್ನು ಎಳೆದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿತ್ತು. ಘಟನೆಯ ವೀಡಿಯೋ ವೈರಲಾಗುತ್ತಿದ್ದಂತೆಯೇ ದೇಶದಾದ್ಯಂತ ಭಾರೀ ಆಕ್ರೋಶಗಳು ಕೇಳಿಬಂದಿತ್ತು.

Join Whatsapp