ರಾಜ್ಯ ಬಿಜೆಪಿ ಸರಕಾರ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸುತ್ತಿದೆ: ಸಿದ್ದರಾಮಯ್ಯ ಕಿಡಿ

Prasthutha|

ಬೆಂಗಳೂರು: ಕೇಂದ್ರ ಗೃಹಮಂತ್ರಿ ಬೊಮ್ಮಾಯಿ ಭಾಗವಹಿಸಿದ್ದ ‘ಸಂಕಲ್ಪ ಸೇ ಸಿದ್ಧಿ’ ಕಾರ್ಯಕ್ರಮವನ್ನು ಪೂರ್ಣ ಹಿಂದಿಮಯವಾಗಿದೆ ಮತ್ತು ರಾಜ್ಯ ಬಿಜೆಪಿ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್ನಲ್ಲೂ ಹಿಂದಿ ಮೆರೆಸುತ್ತಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಮಂಡಲವಾಗಿದ್ದಾರೆ,

- Advertisement -

ಬಿಜೆಪಿ ಸರಕಾರದ ಹಿಂದಿ ಹೇರಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ದು, ರಾಜ್ಯದ ಬೊಮ್ಮಾಯಿ ಸರಕಾರ, ಕೇಂದ್ರದ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ. ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

ಈ ಕುರಿತಿ ಸರಣಿ ಟ್ವೀಟ್ ಮಾಡುತ್ತಿರುವ ಅವರು ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಹೇಳಿದ್ದಾರೆ.

- Advertisement -

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು ಎಂದು ಆರೋಪಿಸಿದ್ದಾರೆ.

Join Whatsapp