ಚಿತ್ರದುರ್ಗ: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟ ಆಗುತ್ತಿರಲಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಬಿಜೆಪಿ ಬೂತ್ ಪ್ರಮುಖರ ಸಭೆಯಲ್ಲಿ ಭಾಗಿಯಾಗಲು ಚಿತ್ರದುರ್ಗಕ್ಕೆ ಆಗಮಿಸಿರುವ ಪ್ರಮೋದ್ ಸಾವಂತ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲದಂತಾಗಿದೆ. ಶೀಘ್ರದಲ್ಲೇ ರಾಜ್ಯದ ಲೋಕಸಭೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಆಗಲಿದೆ. ಪೊಲೀಸರಿಗೆ ಫ್ರೀಹ್ಯಾಂಡ್ ಇಲ್ಲದ ಕಾರಣ ಬಾಂಬರ್ ಬಂಧನ ವಿಳಂಬವಾಗಿದೆ. ಬಾಂಬರ್ ಬಂಧನ ವಿಚಾರದಲ್ಲಿ ರಾಜಕೀಯ ಹಸ್ತಕ್ಷೇಪ ಆಗುತ್ತಿದೆ ಎಂದು ಆರೋಪ ಮಾಡಿದರು.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದ್ದು, ಇದು ಆರಂಭ. ಕಾಂಗ್ರೆಸ್ ಕಾಲದಲ್ಲಿ ಈ ಹಿಂದಿನಂಥ ಸ್ಥಿತಿ ನಿರ್ಮಾಣವಾಗಿದೆ. ಕರಪ್ಟ್ ಕಾಂಗ್ರೆಸ್ ಮನೆಗೆ ಕಳಿಸಿ, ಡಬಲ್ ಇಂಜಿನ್ ಸರ್ಕಾರ ತನ್ನಿ ಎಂದು ಜನತೆಗೆ ಕರೆ ನೀಡಿದರು.