Home ಟಾಪ್ ಸುದ್ದಿಗಳು ಮುಸ್ಲಿಮರ ಶೇ 4ರಷ್ಟು ಮೀಸಲಾತಿ ಮುಂದುವರಿಸುವುದಾಗಿ ಬಿಜೆಪಿ ಮುಚ್ಚಳಿಕೆ ಬರೆದುಕೊಟ್ಟಿತ್ತು: ಸಿದ್ದರಾಮಯ್ಯ ತಿರುಗೇಟು

ಮುಸ್ಲಿಮರ ಶೇ 4ರಷ್ಟು ಮೀಸಲಾತಿ ಮುಂದುವರಿಸುವುದಾಗಿ ಬಿಜೆಪಿ ಮುಚ್ಚಳಿಕೆ ಬರೆದುಕೊಟ್ಟಿತ್ತು: ಸಿದ್ದರಾಮಯ್ಯ ತಿರುಗೇಟು

ಬೀದರ್: ಮುಸ್ಲಿಮರಿಗೆ ನೀಡಲಾಗಿರುವ 4%ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ ಎಂದು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿತ್ತು. ಈಗಲೂ ಆ ಮೀಸಲಾತಿ ಮುಂದುವರಿದಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಒಬಿಸಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿದೆ ಎಂಬ ಮೋದಿ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ , ಹಿಂದೆ ಚಿನ್ನಪ್ಪ ರೆಡ್ಡಿ ಆಯೋಗವು ಮುಸ್ಲಿಮರಿಗೆ 4%ರಷ್ಟು ಮೀಸಲಾತಿ ಕೊಡಬೇಕು ಎಂದು ಶಿಫಾರಸು ಮಾಡಿತ್ತು. ಅದರಂತೆ ಸುಮಾರು 28 ವರ್ಷಗಳಿಂದ ಮುಸ್ಲಿಮರಿಗೆ 4% ರಷ್ಟು ಮೀಸಲಾತಿ ಮುಂದುವರೆದಿದೆ.


ಬೊಮ್ಮಾಯಿ ಸರ್ಕಾರ ಈ ಮೀಸಲಾತಿಯನ್ನು ರದ್ದು ಮಾಡಿತ್ತು. ಈ ಮೀಸಲಾತಿಯನ್ನು ಹಿಂಪಡೆದಿದ್ದಕ್ಕೆ ಈ ವರ್ಗ ಸುಪ್ರಿಂ ಕೋರ್ಟ್ ಮೊರೆ ಹೋಯಿತು. ಸುಪ್ರೀಂ ಕೋರ್ಟ್ ಈಗಿರುವ ಮೀಸಲಾತಿಯನ್ನು ಹಾಗೆಯೇ ಮುಂದುವರಿಸಿ ಎಂದು ಸೂಚಿಸಿತ್ತು. ಆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟ್ ನ ಮುಂದೆ 4%ಮೀಸಲಾತಿಯನ್ನು ಮುಂದುವರೆಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಈ ಮೀಸಲಾತಿ ಈಗಲೂ ಮುಂದುವರೆಯುತ್ತಿದೆ ಎಂದರು.

Join Whatsapp
Exit mobile version